ಸಾಕ್ಷಿನಾಶ ಆರೋಪ : D.K ಶಿವಕುಮಾರ್‌ಗೆ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಆದಾಯ ತೆರಿಗೆ ಇಲಾಖೆ ಅಧಿಕಾರಗಳ ದಾಳಿ ವೇಳೆ ಸಿಕ್ಕ ಸಾಕ್ಷ್ಯವನ್ನು ನಾಶ ಮಾಡಿದ ಪ್ರಕರಣ ಸಂಬಂಧ ಇಂದನ ಸಚಿವ ಡಿ.ಕೆ ಶಿವಕುಮಾರ್‌ಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕೆಲ ತಿಂಗಳ ಹಿಂದೆ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಈಗಲ್ ಟನ್‌ ರೆಸಾರ್ಟ್‌ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಡಿ. ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್‌ ಸಾಕ್ಷಿ ನಾಶಕ್ಕೆ ಯತ್ನಿಸಿದ್ದರು ಎಂದು ಹೇಳಲಾಗಿದ್ದು, ಈ ಸಂಬಂಧ ನೃಪತುಂಗ ರಸ್ತೆಯಲ್ಲಿರುವ ವಿಶೇಷ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ 25 ಸಾವಿರ ರೂ ನಗದು ಹಾಗೂ ಇಬ್ಬರ ಶೂರಿಟಿಯೊಂದಿಗೆ ಷರತ್ತು ಬದ್ದ ಜಾಮೀನು ನೀಡಿದೆ.

 

Leave a Reply

Your email address will not be published.

Social Media Auto Publish Powered By : XYZScripts.com