Test cricket : 400 ವಿಕೆಟ್ ಪಡೆದ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್

ಇಂಗ್ಲೆಂಡ್ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ 400 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಮೂಲಕ ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಪರವಾಗಿ 400 ವಿಕೆಟ್ ಕಬಳಿಸಿದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಆಕ್ಲೆಂಡ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆತಯುತ್ತಿದೆ. ಗುರುವಾರ ನಡೆದ ಮೊದಲ ದಿನದಾಟದಲ್ಲಿ ಕಿವೀಸ್ ಬ್ಯಾಟ್ಸಮನ್ ಟಾಮ್ ಲಥಾಮ್ ವಿಕೆಟ್ ಪಡೆಯುವ ಮೂಲಕ ಬ್ರಾಡ್ 400 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ಪರವಾಗಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದವರ ಪಟ್ಟಿಯಲ್ಲಿ ಜೇಮ್ಸ್ ಆ್ಯಂಡರ್ಸನ್ ಮೊದಲ ಸ್ಥಾನದಲ್ಲಿದ್ದು, ಆ್ಯಂಡರ್ಸನ್ ತಮ್ಮ ಖಾತೆಯಲ್ಲಿ 525 ವಿಕೆಟ್ ಹೊಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com