ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ದೆಹಲಿ : ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ.

ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕಾಗಿ ಈ ಹಿಂದೆ 10 ಸಾವಿರ ರೂಗಳನ್ನು ಸರ್ಕಾರ ಭರಿಸುತ್ತಿತ್ತು. ಆದರೆ ಈ ಮಿತಿಯನ್ನು ತೆಗೆದುಹಾಕಿರುವ ಕೇಂದ್ರ ಸರ್ಕಾರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸುವುದಾಗಿ ಹೇಳಿದೆ.

ಸೇನೆಯ ಅಧಿಕಾರದಲ್ಲಿರುವವರು, ಯೋಧರು, ಅಧಿಕಾರ ಶ್ರೇಣಿಗಿಂತ ಕೆಳಗಿರುವ ಯೋಧರ ಮಕ್ಕಳು, ನಾಪತ್ತೆಯಾಗಿರುವ ಯೋಧರು, ಮೃತಪಟ್ಟ ಅಥವಾ ವಿಕಲಚೇತನ ಯೋಧರ ಮಕ್ಕಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಇದರಿಂದಾಗಿ 3,400 ಮಕ್ಕಳಿಗೆ ಸಹಕಾರಿಯಾಗಲಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಅಥವಾ ಮಿಲಿಟರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗಲಿದ್ದು, ವರ್ಷಕ್ಕೆ 5 ಲಕ್ಷ ವೆಚ್ಚ ತಗುಲುವುದಾಗಿ ಹೇಳಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com