ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ

ಧಾರವಾಡ : ನಿವೃತ್ತ ಯೋಧರೊಬ್ಬರು ಎದೆಗೆ ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಮೃತ ಯೋಧರನ್ನು ಚನ್ನಮಲ್ಲಯ್ಯ ಹಿರೇಮಠ್‌ ಎಂದು ಹೆಸರಿಸಲಾಗಿದೆ. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಇವರು, ಸದಾ ಯೋಚನೆಯಲ್ಲೇ ಮಗ್ನನಾಗಿರುತ್ತಿದ್ದರು. ಮಂಗಳವಾರ ಸಂಜೆ ತಮ್ಮ ಮನೆಯಲ್ಲಿದ್ದ ಗನ್‌ನಿಂದ ಶೂಟ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿರೇಮಠ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇವರು ಎರಡು ವರ್ಷಗಳ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಹೊಂದಿದ್ದು ಹುಬ್ಬಳ್ಳಿಯ ಬ್ಯಾಂಕ್‌ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com