ಮತ್ತೆ ಹೋರಾಟಕ್ಕಿಳಿದ ಅಣ್ಣಾ ಹಜಾರೆ : ರಾಂಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭ

ದೆಹಲಿ : ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮತ್ತೆ ಹೋರಾಟಕ್ಕಿಳಿದಿದ್ದಾರೆ. ಭ್ರಷ್ಟಾಚಾರ ವಿರೋಧಿ ಆಂದಲನ ನಡೆಸಿ 7 ವರ್ಷಗಳ ಬಳಿಕ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಪಾಲ್‌ ಬಿಲ್‌ ಜಾರಿಗಾಗಿ ಒತ್ತಾಯಿಸಿದ್ದಾರೆ.

2011ರಲ್ಲಿ ಲೋಕಪಾಲ್ ಮಸೂದೆ ಜಾರಿ ಮಾಡುವಂತೆ ಆಗ್ರಹಿಸಿ ದೆಹಲಿಯ ರಾಂಲೀಲಾ ಮೈದಾನದಲ್ಲಿ ಅಣ್ಣಾ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅದೇ ಸ್ಥಳದಲ್ಲೇ ಇಂದಿನಿಂದ ಅಣ್ಣಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅಲ್ಲದೆ ಇವರಿಗೆ ಸಾವಿರಾರು ಮಂದಿ ಬೆಂಬಲ ಸೂಚಿಸಿದ್ದು, ಸತ್ಯಗ್ರಹದಲ್ಲಿ ಭಾಗಿಯಾಗಲಿದ್ದಾರೆ.

ಸ್ವತಂತ್ರ್ಯ ಹೋರಾಟಗಾರರಾದ ಭಗತ್‌ ಸಿಂಗ್‌, ರಾಜ್‌ಗುರು, ಸುಖ್‌ದೇವ್‌ ಅವರ ಹುತಾತ್ಮ ದಿನವಾದ ಕಾರಣ ಇಂದಿನಿಂದ ಹೋರಾಟ ಆರಂಭಿಸಿರುವುದಾಗಿ ಅಣ್ಣಾ ಹಜಾರೆ ಹೇಳಿದ್ದಾರೆ.

ಹೋರಾಟದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ರೈಲುಗಳನ್ನು ಸರ್ಕಾರ ರದ್ದು ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಮ್ಮ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಆದರೆ ಇದಕ್ಕೆಲ್ಲ ನಾವು ಬಗ್ಗುವುದಿಲ್ಲ. ನಮ್ಮ ಹೋರಾಟ ಮುಂದುವರಿಸುತ್ತೇವೆ. ಲೋಕಪಾಲ್‌ ಮಸೂದೆಯನ್ನು ಜಾರಿಗೆ ತಂದು ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published.