ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭ

ರಾಜ್ಯದ್ಯಂತ ಮಾರ್ಚ್ 23 ಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ತರಗತಿಯ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 6 ರವರೆಗೆ ನಡೆಯಲಿವೆ. ಒಟ್ಟು 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ರಾಜ್ಯದಲ್ಲಿ 2,817 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. 45 ಸೂಕ್ಷ್ಮ ಮತ್ತು 23 ಅತಿ ಸೂಕ್ಷ್ಮ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.  ಕಡ್ಡಾಯವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿಯೇ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 31,801 ವಿದ್ಯಾರ್ಥಿಗಳು, ಚಿಕ್ಕ ಮಗಳೂರು ಜಿಲ್ಲೆಯಲ್ಲಿ 14897, ಕಲಬುರ್ಗಿ ಜಿಲ್ಲೆಯಲ್ಲಿ 43300, ಬಳ್ಳಾರಿ ಜಿಲ್ಲೆಯಲ್ಲಿ 32220, ದಾವಣಗೆರೆಯಲ್ಲಿ 26869 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com