ಕಾರ್ತಿ ಚಿದಂಬರಂಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ದೆಹಲಿ : ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಶುಕ್ರವಾರ ದೆಹಲಿ ಹೈಕೋರ್ಟ್‌ ಷರತ್ತು ಬದ್ದ ಜಾಮೀನು ನೀಡಿದೆ.

10 ಲಕ್ಷ ಶೂರಿಟಿಯ ಬಾಂಡ್ ಇರಿಸಿಕೊಂಡು ಜಾಮೀನು ಮಂಜೂರು ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ವಿದೇಶಿ ಪ್ರಯಾಣ ಮಾಡುವಂತಿಲ್ಲ. ಸಾಕ್ಷಿಗಳು ಅಥವಾ ಬ್ಯಾಂಕ್ ಖಾತೆಗಳ ಮೇಲೆ ಪ್ರಭಾವ ಬೀರುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

ಈ ಹಿಂದೆ ಮಾರ್ಚ್ 1ರಂದು ಕಾರ್ತಿ ಚಿದಂಬರಂ ಅವರನ್ನು ಭ್ರಷ್ಟಾಚಾರ ಹಗರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, 22 ದಿನಗಳ ಬಳಿಕ ಜಾಮೀನು ಸಿಕ್ಕಿದೆ.

 

Leave a Reply

Your email address will not be published.

Social Media Auto Publish Powered By : XYZScripts.com