Test Cricket : ಕೇನ್ ವಿಲಿಯಮ್ಸನ್ ದಾಖಲೆ : ಕಿವೀಸ್ ಪರ ಅತಿ ಹೆಚ್ಚು ಶತಕ ಬಾರಿಸಿದ ಸಾಧನೆ

ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ ನ್ಯೂಜಿಲೆಂಡ್ ಪರವಾಗಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಕೇನ್ ವಿಲಿಯಮ್ಸನ್ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಆಕ್ಲೆಂಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ 18ನೇ ಟೆಸ್ಟ್ ಶತಕ ಸಿಡಿಸಿದ ಕೇನ್ ವಿಲಿಯಮ್ಸನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೆಸ್ಟ ಕ್ರಿಕೆಟ್ ನಲ್ಲಿ ನ್ಯೂಜಿಲೆಂಡ್ ಪರವಾಗಿ ತಲಾ 17 ಶತಕ ಬಾರಿಸಿರುವ ಕಿವೀ ಬ್ಯಾಟ್ಸಮನ್ ಗಳಾದ ಮಾರ್ಟಿನ್ ಕ್ರೋ ಹಾಗೂ ರಾಸ್ ಟೇಲರ್ ಅವರನ್ನು ಕೇನ್ ವಿಲಿಯಮ್ಸನ್ ಹಿಂದಿಕ್ಕಿದ್ದಾರೆ. ತಮ್ಮ ವೃತ್ತಿ ಜೀವನದ 64ನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ 27 ವರ್ಷದ ಕೇನ್ ವಿಲಿಯಮ್ಸನ್ ಇದುವರೆಗೆ 5 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com