ನನ್ನ ಬಗ್ಗೆ ಅವಾಚ್ಯ ಶಬ್ದ ಬಳಸಿ ಮಾತನಾಡ್ತಿರೋ ಪಾಟೀಲ್‌ ಯೋಗ್ಯತೆ ನನಗೆ ಗೊತ್ತು : BSY

ತುಮಕೂರು : ರಾಜ್ಯಸಭಾ ಚುನಾವಣೆಯಲ್ಲಿ 50 ಕ್ಕೂ ಹೆಚ್ಚು ಜನ ಶಾಸಕರ ಬೆಂಬಲವಿದೆ. ಹಾಗಾಗಿ ನಮ್ಮ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್ ವಿರುದ್ದ ಮತ್ತೆ ಹರಿಹಾಯ್ದಿದ್ದಾರೆ. ಕಾಮಗಾರಿ ಗುತ್ತಿಗೆ ನೀಡಿರೋದ್ರಲ್ಲಿ ಅವ್ಯವಹಾರ ನಡೆದಿರೋದು ಸತ್ಯ. ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಅವರು ಹೇಳಿದಂತೆ ಕೇಳಲು ನಾನು ಸಿದ್ದನಿದ್ದೇನೆ. ಹೊರರಾಜ್ಯದಿಂದ ಫೇಕ್ ಸರ್ಟಿಫಿಕೇಟ್ ಗಳನ್ನು ತಂದು ಕಾಮಗಾರಿ ಮಾಡಿದ್ದೇನೆ ಎಂದು ಏಜೆನ್ಸಿಯವರು ಅಪ್ಲೈ ಮಾಡಿದ್ದರು. ಅದಕ್ಕೆ ಅನುಮತಿ ನೀಡಲಾಗಿತ್ತು, ನಾವು ಅದಕ್ಕೆ ಆಕ್ಷೇಪ ಮಾಡಿದ ಮೇಲೆ ಎರಡು ದಿನದ ಹಿಂದೆ ವಿತ್ ಡ್ರಾ ಮಾಡಿದ್ದೇವೆ ಎಂದು ಹೇಳಿದ್ದಾರೆ. 25 ಕೋಟಿ ಕಮಿಷನ್ ಹೊಡೆದು ಕಾಮಗಾರಿ ಟೆಂಡರ್‌ ಕೊಟ್ಟಿದ್ದಾರೆ. ಹೊರಗಡೆಯಿಂದ ಇಬ್ಬರನ್ನು ಕರೆದು ಇಷ್ಟು ದೊಡ್ಡ ಕಾಮಗಾರಿ ಕೊಟ್ಟಿರುವ ಉದ್ದೇಶವೇನು. ಇದು ಅಕ್ಷಮ್ಯ ಅಪರಾಧ. ಈಗ ನನ್ನ ವಿರುದ್ದ ಅವಾಚ್ಯ ಪದ ಬಳಸಿ ಮಾತನಾಡುತ್ತಿರುವುದು ಅವರ ಯೋಗ್ಯತೆ ಏನೆಂಬುದನ್ನು ತಿಳಿಸುತ್ತದೆ ಎಂದು ಗುಡುಗಿದ್ದಾರೆ.

Leave a Reply

Your email address will not be published.