10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಬೆಂಕಿ ಹಚ್ಚಿ ಸುಟ್ಟ ಸಹಪಾಠಿಗಳು !

ಗುವಾಹಟಿ : ಅಸ್ಸಾಂನ ನಗೌನ್‌ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಹಪಾಠಿಗಳೇ ಅತ್ಯಾಚಾರವೆಸಗಿದ್ದು, ಬಳಿಕ ಆಕೆಯನ್ನು ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದಾರೆ.

ಮೂವರು ಬಾಲಕರಲ್ಲಿ ಇಬ್ಬರು ಬಾಲಕಿಯ ಸ್ನೇಹಿತರು ಎಂದು ತಿಳಿದುಬಂದಿದೆ. ಇನ್ನೊಬ್ಬ ಆರೋಪಿ ಅದೇ ಗ್ರಾಮದವನು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ಸ್ನೇಹಿತರು ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯ ಮೇಲೆ ಸೀಮೇಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಬಾಲಕಿಯ ದೇಹ ಶೇ.90ರಷ್ಟು ಸುಟ್ಟುಹೋಗಿದ್ದು, ಕೂಡಲೆ ಇದನ್ನು ನೋಡಿದ ನೆರೆಯವರು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಕಿಯ ದೇಹ ಬಹುತೇಕ ಭಾಗ ಸುಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ,

ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com