JDS ಗೆ ಗುಡ್ ಬೈ ಹೇಳಿದ ಬಂಡಾಯ ಶಾಸಕರು : ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಕೆ
ಬೆಂಗಳೂರು : ಜೆಡಿಎಸ್ನ ಬಂಡಾಯ ಶಾಸಕರು ಇಂದು ಸ್ಪೀಕರ್ ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆಗೊಳ್ಳಲು ನಿರ್ಧರಿಸಿರುವ ಸಚಿವರುಗಳಾದ ಶಾಸಕ ಜಮೀರ್ ಅಹ್ಮದ್, ಚಲುವರಾಯಸ್ವಾಮಿ, ಭೀಮಾನಾಯ್ಕ್, ಅಖಂಡ ಶ್ರೀನಿವಾಸ ಮೂರ್ತಿ ಇಂದು ಸ್ಪೀಕರ್ ಅವರ ನಿವಾಸಕ್ಕೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇವರ ರಾಜೀನಾಮೆಯನ್ನು ಸ್ಪೀಕರ್ ಕೋಳಿವಾಡ ಅಂಗೀಕರಿಸಿರುವುದಾಗಿ ತಿಳಿದುಬಂದಿದೆ.
ಇನ್ನುಳಿದ ಬಂಡಾಯ ಶಾಸಕರಾದ ಬಾಲಕೃಷ್ಣ, ಇಕ್ಬಾಲ್ ಅನ್ಸಾರಿ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಆದ್ದರಿಂದ ಇವರ ನಡೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಜೊತೆಗೆ ಶ್ರೀರಂಗಪಟ್ಟಣದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ನಿನ್ನೆ ರಾಜೀನಾಮೆ ನೀಡಿದ್ದಾರೆ. ನಾಳೆ ಮೈ
ನಾಳೆ ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಈ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.