ಮಹದಾಯಿ ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆದ ಸರ್ಕಾರ

ಬೆಂಗಳೂರು : ಮಹದಾಯಿ ಜಲ ವಿವಾದ, ಕೂಡಗಿ ಶಾಖೋತ್ಪನ್ನ ಘಟಕದ ವಿರುದ್ಧ ರಾಜ್ಯಾದ್ಯಂತ ನಡೆದ ವಿವಿಧ ಜನಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದ ರೈತರು ಹಾಗೂ ಇತರರ ವಿರುದ್ಧ ಹೂಡಲಾಗಿದ್ದ 127 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಇಲ್ಲಿ ಇಂದು ಮಹತ್ವದ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ  ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದರು.

ಹಲವಾರು ವರ್ಷಗಳಿಂದ ರೈತರ ವಿರುದ್ಧ ಹೂಡಲಾಗಿದ್ದ 97 ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವುದರ ಜೊತೆಗೆ ವಿವಿಧ ಹೋರಾಟಗಳಲ್ಲಿ ಪಾಲ್ಗೊಂಡಿದ್ದ 30 ಕ್ಕೂ ಹೆಚ್ಚು ಪ್ರಕರಣಗಳನ್ನೂ ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದರು.

ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ ದೊರಕಿಸಿಕೊಡುವ ಸಚಿವ ಸಂಪುಟದ ನಿರ್ಣಯವನ್ನು ಇಂದಿನ ಸಂಪುಟ ಸಭೆಯಲ್ಲಿ ಸ್ಥಿರೀಕರಣಗೊಳಿಸಿ, ಸನ್ನಿಹಿತದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಸಚಿವರು ಪ್ರಕಟಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com