ಬಾಲ್ ಟ್ಯಾಂಪರಿಂಗ್ ಪ್ರಕರಣ : ನಾಯಕನ ಸ್ಥಾನದಿಂದ ಕೆಳಗಿಳಿದ ಸ್ಟೀವ್ ಸ್ಮಿತ್

ಕೇಪ್ಟೌನ್ ಟೆಸ್ಟ್ ಪಂದ್ಯದ ಬಾಲ್ ಟ್ಯಾಂಪರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸೀ ಕ್ರಿಕೆಟರ್ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಉಪನಾಯಕನ ಸ್ಥಾನಕ್ಕೆ ಎಡಗೈ ಬ್ಯಾಟ್ಸಮನ್ ಡೇವಿಡ್ ವಾರ್ನರ್ ರಾಜೀನಾಮೆ ನೀಡಿದ್ದಾರೆ. ಸದ್ಯ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಟಿಮ್ ಪೇಯ್ನ್ ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ, ಆಸೀ ಕ್ರಿಕೆಟಿಗ ಬ್ಯಾನ್ ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಪತ್ರಿಗೋಷ್ಟಿಯಲ್ಲಿ ಜಂಟಿ ಹೇಳಿಕೆ ನೀಡಿದ್ದ, ಸ್ಟೀವ್ ಸ್ಮಿತ್ ಹಾಗೂ ಬ್ಯಾನ್ ಕ್ರಾಫ್ಟ್, ಬಾಲ್ ಟ್ಯಾಂಪರಿಂಗ್ ಮಾಡಿದ್ದು ನಿಜ ಎಂದು ತಪ್ಪನ್ನು ಒಪ್ಪಿಕೊಂಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com