ನಮ್ಮ ಕಾಂಗ್ರೆಸ್ ಪಕ್ಷ ಯಾವುದೋ ಒಂದು ಧರ್ಮಕ್ಕೆ ಸೀಮಿತವಲ್ಲ : ರಾಹುಲ್ ಗಾಂಧಿ
ಮಂಡ್ಯ : ಪ್ರಧಾನಿ ಮೋದಿ ದೇಶದ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಬರೀ ಸುಳ್ಳು ಹೇಳಿಕೊಂಡೇ ಸುತ್ತುತ್ತಿದ್ದಾರೆ ಎಂದು ಎಐಸಿಸಿ ಅದಧ್ಯಕ್ಷ ರಾಹುಲ್ ಗಾಂಧಿ ಆರೋಪಿಸದ್ದಾರೆ.
ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಾಧನೆಯ ಬಗ್ಗೆ ನಿತಿನ್ ಗಡ್ಕರಿಯೇ ಹೊಗಳಿದ್ದಾರೆ. ಕಾಂಗ್ರೆಸ್ ಸಾಧನೆ ಏನೆಂಬುದು ಇದರಿಂದಲೇ ತಿಳಿಯುತ್ತದೆ ಎಂದಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದೆ. ಎಲ್ಲರನ್ನೂ ಸೇರಿಸಿಕೊಂಡು ನಾವು ಮುನ್ನಡೆಯುತ್ತಿದ್ದೇವೆ. ನಮ್ಮ ಸರ್ಕಾರ ಯಾವುದೋ ಒಂದು ಧರ್ಮಕ್ಕೆ ಸೀಮಿತವಲ್ಲ ಎಂದಿದ್ದಾರೆ.