IPL : ರಾಜಸ್ಥಾನ ರಾಯಲ್ಸ್ ನಾಯಕನ ಸ್ಥಾನದಿಂದ ಕೆಳಗಿಳಿದ ಸ್ಮಿತ್ : ರಹಾನೆಗೆ RR ನೇತೃತ್ವ

ಬಾಲ್ ಟ್ಯಾಂಪರಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಸ್ಟೀವ್ ಸ್ಮಿತ್ ರಾಜಸ್ಥಾನ ರಾಯಲ್ಸ್ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಸ್ಟೀವ್ ಸ್ಮಿತ್ ಸ್ಥಾನಕ್ಕೆ ಅಜಿಂಕ್ಯ ರಹಾನೆಗೆ ರಾಜಸ್ಥಾನ ರಾಯಲ್ಸ್ ತಂಡದ ಜವಾಬ್ದಾರಿಯನ್ನು ವಹಿಸಲಾಗಿದೆ.

ಕೇಪ್ ಟೌನ್ ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ ಆಸೀ ಬ್ಯಾಟ್ಸಮನ್ ಬ್ಯಾನ್ ಕ್ರಾಫ್ಟ್ (ಬಾಲ್ ಟ್ಯಾಂಪರಿಂಗ್) ಚೆಂಡನ್ನು ವಿರೂಪಗೊಳಿಸಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಪತ್ರಿಕಾಗೋಷ್ಟಿಯಲ್ಲಿ ಸ್ಟೀವ್ ಸ್ಮಿತ್ ಹಾಗೂ ಬ್ಯಾನ್ ಕ್ರಾಫ್ಟ್ ಬಾಲ್ ಟ್ಯಾಂಪರಿಂಗ್ ಮಾಡಿರುವುದಾಗಿ ಮಾಧ್ಯಮಗಳೆದುರು ತಪ್ಪನ್ನು ಒಪ್ಪಿಕೊಂಡಿದ್ದರು.

ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆಸೀ ಆಟಗಾರರ ಬಗ್ಗೆ ಕ್ರಿಕೆಟ್ ಅಭಿಮಾನಿಗಳಿಂದ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ನಾಯಕನ ಸ್ಥಾನದಿಂದ ಹಾಗೂ ಡೇವಿಡ್ ವಾರ್ನರ್ ಉಪನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com