IPL : ಸ್ಮಿತ್, ವಾರ್ನರ್ ಐಪಿಎಲ್ ಭವಿಷ್ಯಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಬಾಲ್ ಟ್ಯಾಂಪರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ 2018ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡುದಂತೆ ಬಿಸಿಸಿಐ ನಿಷೇಧ ಹೇರಿದೆ. ಇದಕ್ಕೂ ಮೊದಲು ಸ್ಮಿತ್ ಹಾಗೂ ವಾರ್ನರ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಒಂದು ವರ್ಷ ನಿಷೇಧ ಹೇರಿದೆ.

ರಾಜಸ್ಥಾನ ರಾಯಲ್ಸ್ ಹಾಗೂ ಸನ್ ರೈಸರ್ಸ್ ನಾಯಕತ್ವದಿಂದ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಕೆಳಗಿಳಿದಿದ್ದರು. ಇದೀಗ ಆಟಗಾರರಾಗಿಯೂ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸದಂತೆ ಬಿಸಿಸಿಐ ನಿಷೇಧ ಹೇರಿದೆ.

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಕೇಪ್ ಟೌನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ಆಸೀ ಆಟಗಾರ ಕ್ಯಾಮರಾನ್ ಬ್ಯಾನ್ ಕ್ರಾಪ್ಟ್ ಚೆಂಡನ್ನು ವಿರೂಪಗೊಳಿಸಿದ್ದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿತ್ತು.

Leave a Reply

Your email address will not be published.

Social Media Auto Publish Powered By : XYZScripts.com