IPL : ಸನ್ ರೈಸರ್ಸ್ ತಂಡದ ನಾಯಕತ್ವ ತ್ಯಜಿಸಿದ ಡೇವಿಡ್ ವಾರ್ನರ್

ಬಾಲ್ ಟ್ಯಾಂಪರಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಎಡಗೈ ಆರಂಭಿಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜಸ್ಥಾನ ರಾಯಲ್ಸ್ ತಂಡದ ನಾಯಕನ ಸ್ಥಾನಕ್ಕೆ ಆಸೀ ಕ್ರಿಕೆಟರ್ ಸ್ಟೀವ್ ಸ್ಮಿತ್ ರಾಜೀನಾಮೆ ನೀಡಿದ್ದರು.

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಕೇಪ್ ಟೌನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ಮೂರನೇ ದಿನದಾಟ ಮುಗಿದ ನಂತರ ಪತ್ರಿಕಾ ಗೋಷ್ಟಿಯಲ್ಲಿ ಸ್ಮಿತ್ ಹಾಗೂ ಬ್ಯಾನ್ ಕ್ರಾಫ್ಟ್ ಬಾಲ್ ಟ್ಯಾಂಪರಿಂಗ್ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರು.

ಬಳಿಕ ಸ್ಟೀವ್ ಸ್ಮಿತ್ ನಾಯಕನ ಸ್ಥಾನದಿಂದ ಹಾಗೂ ಡೇವಿಡ್ ವಾರ್ನರ್ ಉಪನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com