2018 Election : ರಾಜ್ಯ ಚುನಾವಣಾ ರಾಯಭಾರಿಯಾಗಿ ರಾಹುಲ್ ದ್ರಾವಿಡ್ ಆಯ್ಕೆ

‘ ಟೀಮ್ ಇಂಡಿಯಾದ ಮಾಜಿ ಕ್ರಿಕೆಟರ್ ರಾಹುಲ್ ದ್ರಾವಿಡ್ ಅವರನ್ನು 2018ರ ಕರ್ನಾಟಕ ವಿಧಾನಸಭಾ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಗಿದೆ ‘ ಎಂದು ಚುನಾವಣಾ ಆಯೋಗದ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದಿನಗಣನೆ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ, ಮಹತ್ವದ ಬಗ್ಗೆ ರಾಜ್ಯದ ಜನತೆಯಲ್ಲಿ ಅರಿವನ್ನು ಮೂಡಿಸಲು ರಾಹುಲ್ ದ್ರಾವಿಡ್ ಅವರನ್ನು ಬಳಸಿಕೊಳ್ಳಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

ಸ್ಯಾಂಡಲ್ ವುಡ್ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ 2018 ಚುನಾವಣಾ ಗೀತೆಯನ್ನು ಬರೆಯುವ ಜವಾಬ್ದಾರಿ ವಹಿಸಲಾಗಿದೆ. ಮೇ 12ಕ್ಕೆ ರಾಜ್ಯಾದ್ಯಂತ ಮತದಾನ ನಡೆಯಲಿದ್ದು, 15ನೇ ತಾರೀಖಿನಂದು ಫಲಿತಾಂಶ ಹೊರಬೀಳಲಿದೆ.

Leave a Reply

Your email address will not be published.

Social Media Auto Publish Powered By : XYZScripts.com