ಮಹಾರಾಷ್ಟ್ರ CM ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

ದೆಹಲಿ : ಲೋಕಪಾಲ್ ಮಸೂದೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್‌, ಅಣ್ಣಾ ಹಜಾರೆಯವರನ್ನು ಭೇಟಿ ಮಾಡಿ ಅಣ್ಣಾ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಅಣ್ಣಾ ಹಜಾರೆಯವರ ಜೊತೆ ಮಾತುಕತೆ ಬಳಿಕ ಅವರಿಗೆ ಎಳನೀರು ಕುಡಿಸಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಅಣ್ಣಾ ಹಜಾರೆ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಫಡ್ನವೀಸ್‌ ಭಾಷಣ ಮಾಡಿದ್ದು, ಈ ವೇಳೆ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದಾರೆ. ಇದಾದ ಕೆಲ ಹೊತ್ತಿನ ಬಳಿಕ ಪೊಲೀಸರು ಶೂ ಎಸೆದ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕಿಡಿಗೇಡಿಗಳು ಯಾರ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

 

Leave a Reply

Your email address will not be published.

Social Media Auto Publish Powered By : XYZScripts.com