ಕುದುರೆ ಮೇಲೆ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !

ಗಾಂಧಿನಗರ : ದಲಿತ ಯುವಕನೊಬ್ಬ ತನ್ನ ಗ್ರಾಮದಲ್ಲಿ ಕುದುರೆ ಸವಾರಿ ಮಾಡಿದ ಎಂಬ ಕಾರಣಕ್ಕಾಗಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್‌ನ ಭವನಗರದಲ್ಲಿ ನಡೆದಿದೆ.
ಮೃತ ಯುವಕನನ್ನು ಪ್ರದೀಪ್‌ ರಾತೋಡ್‌ (21) ಎಂದು ಹೆಸರಿಸಲಾಗಿದೆ. ಈತ ತ್ನ ಗ್ರಾಮದಲ್ಲಿ ಕುದುರೆ ಸವಾರಿ ಮಾಡುತ್ತಿದ್ದ. ಇದನ್ನು ನೋಡಿದ ಕೆಲ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಕುದುರೆ ಸವಾರಿ ಮಾಡದಂತೆ ಬೆದರಿಕೆ ಹಾಕಿದ್ದರು. ಆದರೂ ಆತ ಕುದುರೆ ಸವಾರಿ ಮಾಡಿದ್ದು, ಇದರಿಂದ ಸಿಟ್ಟಿಗೆದ್ದ ಕೆಲವರು ಆತನನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.
ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆದಿದ್ದು, ಪ್ರದೀಪ್‌ ಸಾಯುವುದಕ್ಕೂ ಮುನ್ನ ಕುದುರೆ ಮೇಲೆ ಸವಾರಿ ಮಾಡುತ್ತಿರುವುದು ಕಂಡು ಬಂದಿದೆ. ಸದ್ಯದಲ್ಲೇ ತನಿಖೆ ಆರಂಭಿಸುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇತ್ತೀಚೆಗಷ್ಟೇ ನನ್ನ ಮಗ ಕುದುರೆಯೊಂದನ್ನು ಕೊಂಡಿದ್ದನು. ಸಂಜೆ ಕರೆ ಮಾಡಿ ಊಟಕ್ಕೆ ಬರುವುದಾಗಿಯೂ ಹೇಳಿದ್ದನು. ಆದರೆ ರಾತ್ರಿ ಎಷ್ಟು ಹೊತ್ತಾದರೂ ಊಟಕ್ಕೆ ಬಂದಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದಾಗ ಮಾರ್ಗ ಮಧ್ಯೆ ಕೊಲೆಯಾಗಿದ್ದನು. ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರದೀಪ್‌ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com