ಚುನಾವಣೆಯಲ್ಲಿ JDS ಗೆದ್ದರೆ ರೈತರನ್ನು ಇಸ್ರೇಲ್‌ಗೆ ಕಳುಹಿಸುತ್ತೇನೆ : HDK

ದಾವಣಗೆರೆ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಗೆದ್ದರೆ ಸಂಶೋಧನೆಗಾಗಿ ರೈತರನ್ನು ಇಸ್ರೇಲ್‌ಗೆ ಕಳುಹಿಸುವುದಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದಾವಣಗೆರೆಯ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಡೆದ ವಿಕಾಸಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ 200 ಸಂಶೋಧಕರನ್ನು ಭೇಟಿಯಾಗಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೃಷಿಯ ಸಂಶೋಧನೆಗಾಗಿ ರೈತರಿಗೆ ಇಸ್ರೇಲ್‌ಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ಪಕ್ಷಗಳ ವಿರುದ್ದ ಗುಡುಗಿದ ಎಚ್‌ಡಿಕೆ, ಜನರು ತೆರಿಗೆ ಪಾವತಿಸುತ್ತಿದ್ದಾರೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸರ್ಕಾರ ಜಾಹೀರಾತಿಗಾಗಿ 1 ಸಾವಿರ ಕೋಟಿ ರೂ ಖರ್ಚು ಮಾಡಿದ್ದಾರೆ. ಟಿವಿ ಆನ್‌ ಮಾಡಿದರೆ ಸಾಕು ಸರ್ಕಾರದ ಜಾಹೀರಾತುಗಳೇ ಕಾಣಿಸುತ್ತವೆ ಎಂದು ಆರೋಪಿಸಿದ್ದಾರೆ.
ಮೇ.12ರಂದು ನೀವು ತೆಗೆದುಕೊಳ್ಳುವ ನಿರ್ಧಾರದಲ್ಲಿ 6.5 ಕೋಟಿ ಜನರ ಭವಿಷ್ಯ ಅಡಗಿದೆ. ಎರಡೂ ಪಕ್ಷದ ನಾಯಕರು ತಮ್ಮ ರಾಷ್ಟ್ರೀಯ ನಾಯಕರ ಜೊತೆ ಪ್ರವಾಸ ಮಾಡುತ್ತಿದ್ದಾರೆ. ಆದರೆ ರೈತರ ಸಮಸ್ಯೆಗಳ ಬಗ್ಗೆ ಒಬ್ಬರೂ ಮಾತನಾಡುತ್ತಿಲ್ಲ. ನನಗೆ ಒಂದು ಅವಕಾಶ ಕೊಟ್ಟು ನೋಡಿ ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com