ಕಾವೇರಿ ವಿವಾದ : ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ತಮಿಳುನಾಡು

ದೆಹಲಿ : ಸುಪ್ರೀಂಕೋರ್ಟ್ ನೀಡಿದ್ದ ಗಡುವಿನ ಅಂತ್ಯದೊಳಗೆ ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿದ್ದ ಎಂದು ತಮಿಳುನಾಡು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದು, ಕೇಂದ್ರದ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಕಳೆದ ಫೆಬ್ರವರಿ 16ರಂದು ಸುಪ್ರೀಂಕೋರ್ಟ್ ಕಾವೇರಿ ನದಿ ನೀರಿನ ವಿಚಾರವಾಗಿ ಅಂತಿಮ ತೀರ್ಪು ನೀಡಿದ್ದು, ಆರು ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿತ್ತು. ಆದರೆ ನಿನ್ನೆಗೆ ಸುಪ್ರೀಂಕೋರ್ಟ್‌ ನೀಡಿದ್ದ 6ತಿಂಗಳ ಗಡುವು ಮುಗಿದಿದ್ದರೂ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ. ಆದ್ದರಿಂದ ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವಂತೆ ಹಾಗೂ ಶೀಘ್ರವೇ ಕಾವೇರಿ ನದಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡು ಮನವಿ ಮಾಡಿದೆ.
 ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಈ ವಿಚಾರದಲ್ಲಿ ಅಸಹಕಾರ ತೋರುತ್ತಿದೆ. ಅಲ್ಲದೆ ಕಾವೇರಿ ನಿರ್ವಹಣಾ ಮಂಡಳಿಯನ್ನೂ ರಚನೆ ಮಾಡುತ್ತಿಲ್ಲ. ಇದು ತಮಿಳುನಾಡಿನ ಜನರ ಹಿತಾಸಕ್ತಿಯ ವಿಚಾರವಾಗಿದ್ದು, ಇದರಲ್ಲಿ ನಿರ್ಲಕ್ಷ್ಯ ಮಾಡುವುದನ್ನು ಎಂದಿಗೂ ಸಹಿಸುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದೆ. ಅಲ್ಲದೆ ಕರ್ನಾಟಕದ ಹಿತದೃಷ್ಠಿಯಿಂದಾಗಿಯೇ ಕೇಂದ್ರ ಸರ್ಕಾರ ತಡ ಮಾಡುತ್ತಿರುವುದಾಗಿ ಆರೋಪಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com