ಅನೈತಿಕ ಸಂಬಂಧ ಹಿನ್ನೆಲೆ : ಪತ್ನಿಯನ್ನು ಕೊಲೆಗೈದು ನೇಣಿಗೆ ಶರಣಾದ ಪತಿ

ಮಂಡ್ಯ : ಪತ್ನಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಗಂಡ ತಾನು ನೇಣು ಹಾಕಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗಂಗಮತ ಬೀದಿ ನಿವಾಸಿ ಗಂಗಮ್ಮ ಅಲಿಯಾಸ್ ಪವಿತ್ರ (25) ಎಂಬ ಗೃಹಿಣಿ ಕೊಲೆಯಾಗಿದ್ದಾಳೆ.

ಸ್ಥಳಕ್ಕೆ ಮಳವಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿದ ಆರೋಪಿ ಚಂದ್ರಶೇಖರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com