ಕಾರು ಗುದ್ದಿದ ರಭಸಕ್ಕೆ ನೆಲಕ್ಕುರುಳೇ ಬಿಡ್ತು ನಾಲ್ಕಂತಸ್ತಿನ ಕಟ್ಟಡ !!

ಇಂದೋರ್‌ : ಅತಿ ವೇಗವಾಗಿ ಬಂದ ಕಾರೊಂದು ನಾಲ್ಕಂತಸ್ತಿನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಟ್ಟಡ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9.20ರ ಸುಮಾರಿಗೆ ಘಟನೆ ನಡೆದಿದೆ. ಕಟ್ಟಡ ಹಳೆಯದಾಗಿದ್ದ ಕಾರಣ ಕಾರು ಗುದ್ದಿದ ಕೂಡಲೆ ನೆಲಕ್ಕುರುಳಿರುವುದಾಗಿ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಅಲ್ಲದೆ ಕಟ್ಟಡದಲ್ಲಿ ಹೋಟೆಲ್‌ ಹಾಗೂ ಲಾಡ್ಜ್‌ಗಳಿದ್ದು, ಲಾಡ್ಜ್‌ನಲ್ಲಿ ಉಳಿದಿದ್ದ ಅನೇಕರಿಗೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಅನೇಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಡಿಐಜಿ ಹರಿನಾರಾಯಣ ಮಿಶ್ರಾ ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com