ಭಾರತ್‌ ಬಂದ್‌ : ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಐವರ ಸಾವು

ದೆಹಲಿ : ಎಸ್‌ಸಿ, ಎಸ್‌ಟಿ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ದೇಶಾದ್ಯಂತ ದಲಿತಪರ ಸಂಘಟನೆಗಳು ಭಾರತ್‌ ಬಂದ್‌ ಪ್ರತಿಭಟನೆ ನಡೆಸುತ್ತಿವೆ. ಮಧ್ಯಪ್ರದೇಶದ ಗ್ವಾಲಿಯರ್‌, ಭಿಂಡ್‌, ಮೊರೆನಾ, ಸಾಗರ್‌, ಬಾಲಘಾಟ್‌, ಸತ್ನಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಐವರು ಬಲಿಯಾಗಿರುವುದಾಗಿ ಮೂಲಗಳು ತಿಳಿಸಿವೆ.


ಗ್ವಾಲಿಯರ್‌ ಹಾಗೂ ಮೊರೆನಾದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದು, 19 ಮಂದಿ ಪ್ರತಿಭಟನಾಕಾರುು ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವುದಾಗಿ ಹೇಳಲಾಗಿದೆ. ನಾಳೆ ಬೆಳಗ್ಗೆಯವರೆಗೂ ಇಂಟರ್‌ನೆಟ್‌ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ. ಮೊರೆನಾದಲ್ಲಿ ಹಿಂಸಾಚಾರಕ್ಕೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಮತ್ತೊಂದೆಡೆ ಜೈಪುರದಲ್ಲೂ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ರಾಜಸ್ಥಾನ ಸೇರಿದಂತೆ ಹಲವೆಡೆ ರಸ್ತೆ, ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. 30ಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.


ಒರಿಸ್ಸಾದಲ್ಲೂ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ ದಾಖಲಿಸಬೇಕು ಹಾಗೂ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಸುಪ್ರೀಂಕೋರ್ಟ್‌ ಇತ್ತೀಚೆಗಷ್ಟೇ ತೀರ್ಪೊಂದನ್ನು ನೀಡಿತ್ತು.

Leave a Reply

Your email address will not be published.

Social Media Auto Publish Powered By : XYZScripts.com