ಒಂದು ವೋಟು ಒಂದು ನೋಟು : ರವಿಕೃಷ್ಣಾರೆಡ್ಡಿ ಪರ ಯೋಗೇಂದ್ರ ಯಾದವ್‌ ಪ್ರಚಾರ

ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಮೇ 12ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿವೆ. ಈ ಮಧ್ಯೆ ರಾಜಕೀಯದಲ್ಲಿ ಸರಳ ಜೀವಿ ಎಂದು ಹೆಸರು ಪಡೆದಿರುವ ರವಿಕೃಷ್ಣಾ ರೆಡ್ಡಿ ಸಹ ಸ್ಪರ್ಧೆಗೆ ಸಿದ್ಧವಾಗಿದ್ದಾರೆ.

ಜಯನಗರ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿ ಸ್ಪರ್ಧಿಸಲಿದ್ದು, ಅವರನ್ನು ಬೆಂಬಲಿಸಲು ಯೋಗೇಂದ್ರ ಯಾದವ್‌ ಪ್ರಚಾರ ನಡೆಸಲಿದ್ದಾರೆ. ಅಲ್ಲದೆ ಒಂದು ವೋಟು, ಒಂದು  ನೋಟು ದೇಣಿಗೆ ಸಂಗ್ರಹ ಅಭಿಯಾನಕ್ಕೂ ಚಾಲನೆ ನೀಡಲಿದ್ದಾರೆ.

ಇದೇ ಏಪ್ರಿಲ್‌ 4ರಂದು ಬುಧವಾರ ಬೆಳಗ್ಗೆ 8.30ಕ್ಕೆ ಜಯನಗರದ ಮಯ್ಯಾಸ್ ಹೋಟೆಲ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಾಹಿತಿ ದೇವನೂರು ಮಹಾದೇವ. ಸಾಮಾಜಿಕ ಹೋರಾಟಗಾರ ಎಸ್‌.ಆರ್‌ ಹಿರೇಮಠ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com