ಸಿದ್ಧರಾಮಯ್ಯ ವಿರುದ್ದ ಚಾರ್ಜ್‌ಶೀಟ್‌ ಸಲ್ಲಿಕೆಯಲ್ಲೂ ಯಡವಟ್ಟು ಮಾಡಿಕೊಂಡ BJP !

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್‌ ಸಲ್ಲಿಸಿದ್ದು, ಇದರಲ್ಲೂ ಯಡವಟ್ಟು ಮಾಡಿಕೊಂಡಿದೆ.
ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಇದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ನಲ್ಲೂ ಪ್ರಕಟವಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿಲಾಗಿದೆ. ಜೊತೆಗೆ 2012ರಲ್ಲಿ ಮಂಡೂರಿನಲ್ಲಿ ಕಸದ ಸಮಸ್ಯೆ ಉಂಟಾಗಿತ್ತು. ಅಂದು ಬಿಬಿಎಂಪಿ ಹಾಗೂ ರಾಜ್ಯದಲ್ಲಿ ಉಂಟಾದ ಸಮಸ್ಯೆಯನ್ನು ಸಿದ್ದರಾಮಯ್ಯ ಸರ್ಕಾರ ಬಗೆಹರಿಸುವಲ್ಲಿ ವಿಫಲವಾಗಿತ್ತು ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದೆ.
ಬೆಂಗಳೂರು ಕಸದ ಸಮಸ್ಯೆ ಬಗ್ಗೆ ಅಕ್ಟೋಬರ್‌ 26,2012ರಲ್ಲಿ ನ್ಯೂಯಾರ್ಕ್‌ ಟೈಮ್ಸ್‌ನಲ್ಲಿ ಪ್ರಕಟವಾಗಿತ್ತು. 2012ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಈಗ ಸಿದ್ದರಾಮಯ್ಯ ಸರ್ಕಾರದ ಮೇಲೆ ಬಿಜೆಪಿ ಆರೋಪಿಸಿದ್ದು, ಮತ್ತೆ ಮುಜುಗರ ಅನುಭವಿಸುವಂತಾಗಿದೆ.

Leave a Reply

Your email address will not be published.