IPL : ಸ್ಮಿತ್ ಬದಲು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಹೆನ್ರಿಕ್ ಕ್ಲಾಸೆನ್ ಸೇರ್ಪಡೆ

ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಒಂದು ವರ್ಷ ನಿಷೇಧಕ್ಕೆ ಒಳಗಾಗಿರುವ ಆಸ್ಟ್ರೇಲಿಯಾ ಆಟಗಾರ ಸ್ಟೀವ್ ಸ್ಮಿತ್ ಬದಲಿಗೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸೌತ್ ಆಫ್ರಿಕಾ ಹೆನ್ರಿಕ್ ಕ್ಲಾಸೆನ್ ಸೇರಿಕೊಂಡಿದ್ದಾರೆ.

ದಕ್ಷಿಣ ಆಪ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಕೇಪ್ ಟೌನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ವೇಳೆ ಬಾಲ್ ಟ್ಯಾಂಪರಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದ ಜವಾಬ್ದಾರಿಯನ್ನು ಹೊತ್ತುಕೊಂಡು ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡದ ನಾಯಕ & ಉಪನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಶಿಕ್ಷೆಯ ರೂಪದಲ್ಲಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅವರ ಮೇಲೆ ಒಂದು ವರ್ಷ ನಿಷೇಧ ಹೇರಿತ್ತು. ಐಪಿಎಲ್ ನಲ್ಲಿಯೂ ಭಾಗವಹಿಸದಂತೆ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅವರಿಬ್ಬರ ಮೇಲೆ ಬಿಸಿಸಿಐ ನಿರ್ಬಂಧ ಹೇರಿತ್ತು.

Leave a Reply

Your email address will not be published.

Social Media Auto Publish Powered By : XYZScripts.com