BJP ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ : ಮುತಾಲಿಕ್‌

ಚಿಕ್ಕಮಗಳೂರು : ಶ್ರೀರಾಮ ಸೇನೆ ಶಿವಸೇನೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಭಾರಿ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದಲ್ಲಿ 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಮಾಡುತ್ತೇನೆ. ಹಿಂದೂತ್ವ ನಮ್ಮ ಪ್ರಮುಖ ಅಜೆಂಡಾ. ಬಿಜೆಪಿಯದ್ದು ಡೋಂಗಿ ಹಿಂದುತ್ವ. ಬಿಜೆಪಿ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ. ನಾವು ಹಿಂದುತ್ವಕ್ಕಾಗಿ ರಾಜಕೀಯ ಮಾಡುತ್ತೇವೆ ಎಂದಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ, ಭಾರತ ಗೋ ಮಾಂಸ ಸಾಗಾಟದಲ್ಲಿ ನಂಬರ್ ೧ ಆಗಿದೆ. ಅನಂತ್ ಕುಮಾರ್ ಗೋ ಮಾಂಸ ನಿಷೇಧದ ಬಗ್ಗೆ ಡೋಂಗಿ ಮಾತನಾಡುತ್ತಾರೆ. ಗೋ ಮಾಂಸ ನಿಷೇಧ ಎನ್ನುವುದು ಬಿಜೆಪಿಯ ಬೂಟಾಟಿಕೆ. ದತ್ತಪೀಠವೂ ಗೋ ಮಾಂಸ ನಿಷೇಧದ ಹಾಗೆಯೇ. ದತ್ತಪೀಠವನ್ನು ಸಹ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಿ ಟಿ ರವಿ ಇದೇ ದತ್ತಪೀಠ ವಿವಾದದಿಂದ ಮೂರು ಭಾರಿ ಶಾಸಕರಾಗಿರುವುದಾಗಿ ಆರೋಪಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com