Test Cricket : ಜೇಮ್ಸ್ ಆ್ಯಂಡರ್ಸನ್ ವಿಶ್ವದಾಖಲೆ : ಕರ್ಟ್ನಿ ವಾಲ್ಷ್ ಹಿಂದಿಕ್ಕಿದ ಇಂಗ್ಲೆಂಡ್ ವೇಗಿ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಎಸೆತಗಳನ್ನು ಬೌಲ್ ಮಾಡಿದ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವೆಸ್ಟ್ ಇಂಡೀಸ್ ಮಾಜಿ ವೇಗಿ ಕರ್ಟ್ನಿ ವಾಲ್ಷ್ ಅವರನ್ನು ಹಿಂದಿಕ್ಕಿ ಜೇಮ್ಸ್ ಆ್ಯಂಡರ್ಸನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ವೃತ್ತಿಜೀವನದ 30,020 ನೇ ಎಸೆತವನ್ನು ಬೌಲ್ ಮಾಡಿ ವಿಶ್ವದಾಖಲೆ ಸೃಷ್ಟಿಸಿದ್ದಾರೆ.  ಟೆಸ್ಟ್ ಕ್ರಿಕೆಟ್ ನಲ್ಲಿ ಕರ್ಟ್ನಿ ವಾಲ್ಷ್ ಒಟ್ಟು 30,019 ಎಸೆತಗಳನ್ನು ಬೌಲ್ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com