ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತನ ಮಾನ್ಯತೆ ರದ್ದು : ಆದೇಶ ತಡೆ ಹಿಡಿದ ಮೋದಿ ಕಾರ್ಯಾಲಯ

ದೆಹಲಿ : ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ನಿರ್ಧಾರವನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಡೆಹಿಡಿದದೆ.
ಸ್ಮೃತಿ ಇರಾನಿ ನೇತೃತ್ವದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿದ್ದ ಆದೇಶ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರ ಸತ್ಯ ಹೇಳುವ ಮಾಧ್ಯಮಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಈ ಸಂಬಂಧ ಸಲಹೆ ಪಡೆಯಲು ಇಲಾಖೆ ಸಿದ್ದವಿದೆ ಎಂದಿದ್ದಾರೆ. ಅಲ್ಲದೆ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತನ ವಿರುದ್ದ ಕ್ರಮ ಕೈಗೊಳ್ಲುವ ಆಯ್ಕೆ ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾಗೆ ಬಿಟ್ಟ ವಿಚಾರ ಎಂದು ಕೇಂದ್ರದ ವಿರುದ್ದ ವಿಪಕ್ಷಗಳು ಹರಿಹಾಯ್ದಿವೆ.

Leave a Reply

Your email address will not be published.

Social Media Auto Publish Powered By : XYZScripts.com