ವಿದ್ಯಾರ್ಥಿಗಳೇ ಗಮನಿಸಿ : SSLC ಪರೀಕ್ಷಾ ಫಲಿತಾಂಶದ ದಿನಾಂಕ ಘೋಷಣೆ

ಬೆಂಗಳೂರು : ಶುಕ್ರವಾರ ಎಸ್‌ಎಸ್‌ಎಲ್‌ಸಿಯ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ಮೇ 7 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌, ಇದಕ್ಕಾಗಿ ಈಗಾಗಲೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮೇ 7ರಂದು ಇಂಟರ್‌ನೆಟ್‌ನಲ್ಲಿ ಪ್ರಕಟಗೊಳ್ಳಲಿದ್ದು, ಮೇ 8ರಂದು ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ಸುಧಾರಣಾ ಕ್ರಮ ತೃಪ್ತಿ ತಂದಿದೆ. 33 ವಿಷಯಗಳಲ್ಲಿ ಪರೀಕ್ಷೆ ನಡೆದಿದ್ದು, ಫಲಿತಾಂಶ ಉತ್ತಮವಾಗಿರುವ ಭರವಸೆ ಇದೆ ಎಂದಿದ್ದಾರೆ.

ಮರು ಮೌಲ್ಯಮಾಪನಕ್ಕೆ ಮೇ 8ರಿಂದ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು ಎಂದಿದ್ದಾರೆ.

Leave a Reply

Your email address will not be published.