CWG 2018 : ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಕಂಚು ಗೆದ್ದ ದೀಪಕ್ ಲಾಥೆರ್

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಪದಕ ದೊರೆತಿದೆ. ಪುರುಷರ ವೇಟ್ ಲಿಫ್ಟಿಂಗ್ ಸ್ಪರ್ಧೆಯ 69 ಕೆ.ಜಿ ವಿಭಾಗದಲ್ಲಿ ಭಾರತದ ದೀಪಕ್ ಲಾಥೆರ್ ಶುಕ್ರವಾರ ಕಂಚಿನ ಪದಕವನ್ನು ಜಯಿಸಿದ್ದಾರೆ.

ಈ ಸಲದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಇದು ನಾಲ್ಕನೇ ಪದಕವಾಗಿದೆ. ಮಹಿಳೆಯರ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಹಾಗೂ ಸಂಜಿತಾ ಚಾನು ಚಿನ್ನದ ಪದಕ ಗೆದ್ದಿದ್ದರು. ಪುರುಷರ ವಿಭಾಗದಲ್ಲಿ ಕನ್ನಡಿಗ ಗುರುರಾಜ್ ಪೂಜಾರಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಪ್ರಸಕ್ತ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 5 ಪದಕಗಳನ್ನು ಗೆದ್ದುಕೊಂಡಿದೆ.

 

Leave a Reply

Your email address will not be published.

Social Media Auto Publish Powered By : XYZScripts.com