ಕೃಷ್ಣಮೃಗ ಬೇಟೆ ಪ್ರಕರಣ : ಜಾಮೀನು ತೀರ್ಪು ನಾಳೆಗೆ ಮುಂದೂಡಿಕೆ

ಜೋಧ್‌ಪುರ : ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ನಟ ಸಲ್ಮಾನ್ ಖಾನ್‌ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ ಮುಂದೂಡಲಾಗಿದೆ.
ಗುರುವಾರ ನಡೆದ ಅಂತಿಮ ವಿಚಾರಣೆಯಲ್ಲಿ ಜೋಧ್‌ಪುರ ನ್ಯಾಯಾಲಯ ತೀರ್ಪು ನೀಡಿದ್ದು 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿತ್ತು. ತೀರ್ಪು ಹೊರಬೀಳುತ್ತಿದ್ದಂತೆ ಸಲ್ಮಾನ್‌ ಪರ ವಕೀಲರು ಜೋಧ್‌ಪುರ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದು ಆ ಅರ್ಜಿಯ ವಿಚಾರಣೆ ನಡೆದಿದ್ದು, ನಾಳೆಗೆ ತೀರ್ಪನ್ನು ಕಾಯ್ದಿರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಲ್ಮಾನ್‌ ಖಾನ್‌ಗೆ ಇಂದೂ ಜೈಲೂಟವೇ ಗತಿ ಎಂಬಂತಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com