ಸರಿಗಮಪ ವೇದಿಕೆಗೆ ಬರಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಖ್ಯಾತ ಸಂಗೀತ ಕಾರ್ಯಕ್ರಮ ಸರಿಗಮಪ ಲಿಟಲ್‌ ಚಾಂಪ್ಸ್‌ ಸೀಸನ್‌ 14ಕ್ಕೆ ಈ ವಾರ ಅತಿಥಿಗಳಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರು ಆಗಮಿಸಲಿದ್ದಾರೆ.
ಈ ಬಗ್ಗೆ ಝೀ ಕನ್ನಡ ವಾಹಿನಿಯ ಸಿಬ್ಬಂದಿ ಏನ್‌ ಸುದ್ದಿಗೆ ಹೇಳಿಕೆ ನೀಡಿದ್ದಾರೆ. ವೀರೇಂದ್ರ ಹೆಗ್ಗಡೆಯವರು ಸರಿಗಮಪ ಶೋಗೆ ಅತಿಥಿಗಳಾಗಿ ಆಗಮಿಸಲಿದ್ದು, ಅವರ ಎದುರು ಮಕ್ಕಳು ಹಾಡಲಿದ್ದಾರೆ ಎಂದು ತಿಳಿಸಿದ್ದಾರೆ.


ಇದೇ ಶನಿವಾರ ಹಾಗೂ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ಕಳೆದ ವಾರ ಹಳೆಯ ಸೀಸನ್‌ನ ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಕಳೆದ ಎರಡು ವಾರಗಳ ಹಿಂದೆ ಖ್ಯಾತ ಹಿನ್ನೆಲೆ ಗಾಯಕ ಎಸ್‌.ಪಿ ಬಾಲಸುಬ್ರಮಣ್ಯಂ ಅವರೂ ಸಹ ಸರಿಗಮಪ ವೇದಿಕೆಗೆ ಆಗಮಿಸಿ ಮಕ್ಕಳ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Leave a Reply

Your email address will not be published.