ಲಿಂಗಾಯಿತರೆಲ್ಲರೂ ಕಾಂಗ್ರೆಸ್‌ಗೇ ಮತ ಹಾಕಿ : ಮಾತೆ ಮಹಾದೇವಿ

ಬೆಂಗಳೂರು : ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಮಾನ್ಯತೆ ನೀಡಿದ ಸಿದ್ದರಾಮಯ್ಯ ಸರ್ಕಾರವನ್ನು ಎಲ್ಲರೂ ಬೆಂಬಲಿಸಬೇಕು. ಆದ್ದರಿಂದ ಕಾಂಗ್ರೆಸ್‌ ಪಕ್ಷಕ್ಕೇ ಮತ ಹಾಕಿ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

ಶನಿವಾರ ಬಸವ ಭವನದಲ್ಲಿ ನಡೆದ ಲಿಂಗಾಯಿತ ಸ್ವಾಮೀಜಿಗಳ ಸಭೆಯಲ್ಲಿ ಮಾತನಾಡಿದ ಅವರು. ಕೇಂದ್ರ ಸರ್ಕಾರ. ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದ ಜನ ಸಿದ್ದರಾಮಯ್ಯನವರನ್ನು ಬೆಂಬಲಿಸಬೇಕು, ಇದರಲ್ಲಿ ಯಾವುದೇ ಮುಚ್ಚುಮರೆ ಬೇಡ ಎಂದಿದ್ದಾರೆ.

ಪ್ರತ್ಯೇಕ ಲಿಂಗಾಯಿತ ಧರ್ಮವನ್ನು ತಿರಸ್ಕರಿಸಲು ಅಮಿತ್ ಶಾ ಯಾರು ಎಂದಿರುವ ಮಾತೆ ಮಹಾದೇವಿ ಪ್ರಶ್ನಿಸಿದ್ದಾರೆ.

ಮಾತೆ ಮಹಾದೇವಿ ಅವರ ಹೇಳಿಕೆ ವಿರುದ್ಧ ಹಲವು ಮಠಾಧಿಪತಿಗಳು, ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವೀರಶೈವರು ಸೇರಿದಂತೆ ಹಲವರ ವಿರೋಧವನ್ನೂ ಲೆಕ್ಕಿಸದೆ  ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

 

Leave a Reply

Your email address will not be published.

Social Media Auto Publish Powered By : XYZScripts.com