R.R ನಗರದಿಂದ ಚುನಾವಣಾ ಕಣಕ್ಕಿಳಿಯಲಿದ್ದಾರೆ ಹುಚ್ಚ ವೆಂಕಟ್‌ : ಯಾವ ಪಕ್ಷ ?

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ನಟ ಹುಚ್ಚ ವೆಂಕಟ್ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ಸಂಬಂಧ ಶನಿವಾರ ಪತ್ರಿಕಾಗೋಷ್ಠಿ ಕರೆದಿರುವ ಅವರು ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

 ನಾನು ನರಾಜಕೀಯ ಪ್ರವೇಶ ಮಾಡಲು ನಿರ್ಧರಿಸಿದ್ದೇನೆ. ಆರ್‌ ಆರ್‌ ನಗರದಿಂದ ಕಣಕ್ಕಿಳಿಯುತ್ತೇನೆ. ನೀವೆಲ್ಲರು ನನಗೆ ಬೆಂಬಲ ನೀಡಬೇಕು ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಆದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತಾರಾ ಅಥವಾ ಯಾವುದಾದರೂ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com