Cricket : ಮಿಥಾಲಿ ರಾಜ್ ವಿಶ್ವದಾಖಲೆ : ಅತಿ ಹೆಚ್ಚು ಏಕದಿನ ಪಂದ್ಯ ಆಡಿದ ಸಾಧನೆ

ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅತಿ ಹೆಚ್ಚು ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಆಡಿದ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಮಿಥಾಲಿ ಪಾತ್ರರಾಗಿದ್ದಾರೆ.

ಶುಕ್ರವಾರ ನಾಗಪುರದ ವಿದರ್ಭ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ಭಾರತ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ತಮ್ಮ 192 ನೇ ಏಕದಿನ ಆಡಿದ ಮಿಥಾಲಿ ರಾಜ್, ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಇಂಗ್ಲೆಂಡಿನ ಮಾಜಿ ಕ್ರಿಕೆಟರ್ ಚಾರ್ಲೊಟ್ ಎಡ್ವರ್ಡ್ಸ್ ಅವರನ್ನು ಹಿಂದಿಕ್ಕಿದ್ದಾರೆ. 2017 ಸೆಪ್ಟೆಂಬರ್ ನಲ್ಲಿ ನಿವೃತ್ತರಾಗಿದ್ದ ಚಾರ್ಲೊಟ್ ಎಡ್ವರ್ಡ್ಸ್ 191 ಅಂತರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದರು.

ಮಹಿಳಾ ಕ್ರಿಕೆಟ್ ನ ಸಚಿನ್ ತೆಂಡೂಲ್ಕರ್ ಎಂದೇ ಕರೆಯಲ್ಪಡುವ ಮಿಥಾಲಿ ರಾಜ್, ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ 6 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದು, 6 ಶತಕ ಹಾಗೂ 49 ಅರ್ಧ ಶತಕ ಬಾರಿಸಿದ್ದಾರೆ.

Leave a Reply

Your email address will not be published.