ಬೋನಿನಿಂದ ಹೊರಬಂದ ಟೈಗರ್‌ : ಸಲ್ಮಾನ್‌ ಖಾನ್‌ಗೆ ಜಾಮೀನು ಮಂಜೂರು

ಜೋಧ್‌ಪುರ : ಕೃಷ್ಣಮೃಗ ಬೇಟೆ ಪ್ರಕರಣ ಸಂಬಂಧ ಸಲ್ಮಾನ್‌ ಖಾನ್‌ಗೆ ಜಾಮೀನು ಮಂಜೂರಾಗಿದೆ. ಇದರಿಂದ ಬಾಲಿವುಡ್‌ ನಿರ್ಮಾಪಕರು ನಿರಾಳವಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಸಲ್ಮಾನ್ ಖಾನ್‌ ಜೈಲಿನಲ್ಲಿದ್ದು, 5 ವರ್ಷಗಳ ಶಿಕ್ಷೆ ಪ್ರಕಟವಾದ ದಿನವೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ರವೀಂದ್ರ ಕುಮಾರ್‌ ಜೋಷಿ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ರವೀಂದ್ರ ಕುಮಾರ್‌ ಜೋಷಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬೇರೆ ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದು, 50 ಸಾವಿರ ರೂ ಶೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published.

Social Media Auto Publish Powered By : XYZScripts.com