ಮಹಾರಾಷ್ಟ್ರ : ಶಿವಸೇನೆಯ ಇಬ್ಬರು ನಾಯಕರನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಅಹಮದ್‌ನಗರ : ದ್ವಿಚಕ್ರ ವಾಹನದಲ್ಲಿ ಬಂದು ದುಷ್ಕರ್ಮಿಗಳು ಶಿವಸೇನೆಯ ಇಬ್ಬರು  ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ನಡೆದಿದೆ.
ಶನಿವಾರ ಸಂಜೆ 5 .15ರ ಸುಮಾರಿಗೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮೃತರನ್ನು ಶಿವಸೇನೆಯ ಸಂಜಯ್‌ ಕೊತ್ಕರ್‌ (35) ಹಾಗೂ ಆನಂದ್ ದುಬೆ (40) ಎಂದು ಹೆಸರಿಸಲಾಗಿದೆ.
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಂಜಯ್‌ ಹಾಗೂ ಆನಂದ್‌ ಅವರ ಮೇಲೆ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com