ಸಿದ್ದರಾಮಯ್ಯ ಯಾವತ್ತಿದ್ರೂ ಹುಲಿ…..ಹುಲೀನೇ : ಜಮೀರ್‌ ಅಹ್ಮದ್‌

ಚಿತ್ರದುರ್ಗ: ಹಿರಿಯೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಎಸ್ ಸಿ/ಎಸ್ಟಿ ಹಾಗೂ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಹಿರಿಯೂರು ಶಾಕಸ ಡಿ ಸುಧಾಕರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ಮೊದಲ ಬಾರಿಗೆ ಜಮೀರ್‌ ಅಹ್ಮದ್‌ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿಗೆ ಟಾರ್ಗೆಟ್ ಇರುವುದು ಮುಸ್ಲಿಂ ಹಾಗೂ ಪರಿಶಿಷ್ಟರು ಮಾತ್ರ. ಅನಂತ್ ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಹಿಂದೆ ಕೇಂದ್ರದ ನಾಯಕರ ಹುನ್ನಾರವಿದೆ ಎಂದಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಜಮೀರ್ ಅಹ್ಮದ್‌, ಜೆಡಿಎಸ್ ಪಕ್ಷದಲ್ಲಿ ನಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡರು. ಅವರಿಗೆ ಬುದ್ದಿ ಕಲಿಸಲು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸುತ್ತೇನೆ. ಎಲ್ಲಾ ವರ್ಗದವರನ್ನ ಸಮಾನವಾಗಿ ನೋಡುವ ಪಕ್ಷ ಇದ್ರೆ ಅದು ಕಾಂಗ್ರೆಸ್ ಇದ್ರೆ ಕಾಂಗ್ರೆಸ್ ಮಾತ್ರ. ಸಿದ್ದರಾಮಯ್ಯ ಯಾವತ್ತಿದ್ರೂ ಹುಲಿ…ಹುಲಿನೇ. ಕುಮಾರಸ್ವಾಮಿ ಅವರಿಗೆ ಭಯ ಪ್ರಾರಂಭವಾಗಿದೆ. ಹಾಗಾಗಿ ಸಿದ್ದರಾಮಯ್ಯನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಮಾತು ಕೊಟ್ಟ ಹಾಗೆ ಕುಮಾರಸ್ವಾಮಿ ಆಡಳಿತ ಬಿಟ್ಟುಕೊಡದೆ, ಮಾತನ್ನ ಉಳಿಸಿಕೊಳ್ಳಲಿಲ್ಲ. ಇದು ಲಜ್ಜೆಗೆಟ್ಟ ಪಕ್ಷ ಎಂದಿದ್ದಾರೆ.

 

 

Leave a Reply

Your email address will not be published.