ಕಾವೇರಿ ವಿವಾದ : ಮೇ 3 ರೊಳಗೆ ಸ್ಕೀಂ ರಚಿಸುವಂತೆ ಸುಪ್ರೀಂನಿಂದ ಕೇಂದ್ರಕ್ಕೆ ಆದೇಶ

ದೆಹಲಿ : ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನದಿ ನೀರು ವಿವಾದ ಸಂಬಂಧ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಕೋರಿ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು. ಕೇಂದ್ರದ ವಿರುದ್ದ ತಮಿಳುನಾಡು ಸರ್ಕಾರ ಕೂಡ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಕುರಿತು ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಮೇ.3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕರಡು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡುವವರೆಗೂ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಶಾಂತಿ ಕಾಪಾಡಬೇಕೆಂದು ಸೂಚಿಸಿದೆ.

 

Leave a Reply

Your email address will not be published.

Social Media Auto Publish Powered By : XYZScripts.com