BJP ಶಾಸಕನಿಂದ ಅತ್ಯಾಚಾರ : ಯೋಗಿ ಆದಿತ್ಯನಾಥ್‌ ಮನೆ ಮುಂದೆ ಯುವತಿ ಆತ್ಮಹತ್ಯೆ ಯತ್ನ

ಲಖನೌ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಮನೆಯ ಮುಂದೆ ಯುವತಿ ಹಾಗೂ ಆಕೆಯ ಕುಟುಂಬಸ್ತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಬಿಜೆಪಿ ಶಾಸಕನೊಬ್ಬ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬಸ್ಥರು ಯೋಗಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಕಳೆದ ವರ್ಷ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಹಾಗೂ ಆತನ ಸಹೋದರ ಸೇರಿಕೊಂಡು ಕಳೆದ ವರ್ಷ ಜೂನ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ಯುವತಿ ಆಗಲೇ ಪೊಲೀಸರಿಗೆ ದೂರು ನೀಡಿದ್ದಳು. ದೂರು ನೀಡಿದ ಬಳಿಕ ಆರೋಪಿಗಳು ಯುವತಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಅಷ್ಟಾದರೂ ಪೊಲೀಸರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕುರಿತು ಬಿಜೆಪಿ ನಾಯಕ ಪ್ರತಿಕ್ರಿಯಿಸಿದ್ದು, ನಾನು ಯಾವುದೇ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇದೆಲ್ಲ ರಾಜಕೀಯ ಹುನ್ನಾರ ಎಂದು ಆರೋಪಿಸಿದ್ದಾರೆ.

Leave a Reply

Your email address will not be published.