IPL : ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಕೆ.ಎಲ್ ರಾಹುಲ್

ಮೊಹಾಲಿಯಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಬಲಗೈ ಬ್ಯಾಟ್ಸಮನ್ ಕೆ.ಎಲ್ ರಾಹುಲ್ ದಾಖಲೆ ನಿರ್ಮಿಸಿದ್ದಾರೆ. ಕಿಂಗ್ಸ್ ಇಲೆವನ್ ತಂಡದ ಆರಂಭಿಕ ಬ್ಯಾಟ್ಸಮನ್ ಕೆ.ಎಲ್ ರಾಹುಲ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ.

ಈ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯಂತ ವೇಗದ ಅರ್ಧಶತಕವನ್ನು ಬಾರಿಸಿದ ದಾಖಲೆಯನ್ನು ರಾಹುಲ್ ನಿರ್ಮಿಸಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದ ರಾಹುಲ್, ಒಟ್ಟು 16 ಎಸೆತಗಳನ್ನು ಎದುರಿಸಿದ ಕೆ.ಎಲ್ ರಾಹುಲ್ 6 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಗಳನ್ನು ಸಿಡಿಸಿದರು.

2014 ರಲ್ಲಿ ಏವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದ ಯೂಸುಫ್ ಪಠಾಣ್ ಅವರನ್ನು ರಾಹುಲ್ ಹಿಂದಿಕ್ಕಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com