BJP ಶಾಸಕ ಅತ್ಯಾಚಾರವೆಸಗಿದ್ದಾನೆ ಎಂದಿದ್ದ ಯುವತಿಯ ತಂದೆ ಪೊಲೀಸ್‌ ಕಸ್ಟಡಿಯಲ್ಲೇ ಸಾವು !

ಲಖನೌ : ಬಿಜೆಪಿ ಶಾಸಕ ಕುಲ್‌ದೀಪ್‌ ಸಿಂಗ್‌ ಸೇಂಗಾರ್‌ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದ ಯುವತಿಗೆ ಮತ್ತೊಮ್ಮೆ ಬರ ಸಿಡಿಲು ಬಡಿದಂತಾಗಿದೆ.
ಕುಲದೀಪ್‌ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಇಲ್ಲವೇ ಸಾಯಲು ಬಿಡಿ ಎಂದು ಯೋಗಿ ಆದಿತ್ಯನಾಥ್‌ ಮನೆ ಮುಂದೆ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆ ಸಂಬಂಧ ಯುವತಿಯ ತಂದೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸ್ ಠಾಣೆಯಲ್ಲೇ ಆತನಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ವಾಂತಿ ಮಾಡಲು ಆರಂಭಿಸಿದ್ದ. ಆದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.
ಆದರೆ ಪೊಲೀಸರು ನನ್ನ ತಂದೆಯನ್ನು ಕೊಂದಿದ್ದಾರೆ ಎಂದು ಯುವತಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com