CWG 2018 : ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ : ಇತಿಹಾಸ ನಿರ್ಮಿಸಿದ ಭಾರತ ತಂಡ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಂಡ ಸೊಮವಾರ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿಯೇ ಮಿಶ್ರ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಒಲಿದ ಮೊದಲ ಸ್ವರ್ಣ ಪದಕವಾಗಿದೆ.

ಸೈನಾ ನೆಹ್ವಾಲ್, ಕಿಡಂಬಿ ಶ್ರೀಕಾಂತ್, ಅಶ್ವಿನಿ ಪೊನ್ನಪ್ಪ ಹಾಗೂ ಸಾತ್ವಿಕ್ ರಾಂಕಿ ರೆಡ್ಡಿ ಅವರನ್ನು ಒಳಗೊಂಡ ಭಾರತ ತಂಡ, ಬಲಿಷ್ಟ ಮಲೇಷ್ಯ ವಿರುದ್ಧ 3-1 ರಿಂದ ಜಯ ಗಳಿಸಿ ಬಂಗಾರದ ಪದಕವನ್ನು ಮಡಿಲಿಗೆ ಹಾಕಿಕೊಂಡಿತು.

ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲ ಗೋಪಿಚಂದ್ ಹರ್ಷ ವ್ಯಕ್ತ ಪಡಿಸಿದ್ದಾರೆ. ಸೈನಾ, ರಾಂಕಿ ರೆಡ್ಡಿ ಹಾಗೂ ಕಿಡಂಬಿ ಶ್ರೀಕಾಂತ್ ಪುಲ್ಲೇಲ ಗೋಪಿಚಂದ್ ಅವರ ಶಿಷ್ಯರಾಗಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com