CWG 2018 : ಶೂಟಿಂಗ್ – ಭಾರತಕ್ಕೆ ಮತ್ತೊಂದು ಚಿನ್ನ : ದಾಖಲೆ ಬರೆದ ಹೀನಾ ಸಿಧು

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಒಲಿದಿದೆ. ಮಂಗಳವಾರ ನಡೆದ ಮಹಿಳೆಯರ 25 ಮೀಟರ್ ಪಿಸ್ಟಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಹೀನಾ ಸಿಧು ಬಂಗಾರದ ಪದಕ ಜಯಿಸಿದ್ದಾರೆ.

ಒಟ್ಟು 138 ಪಾಯಿಂಟ್ಸ್ ಸ್ಕೋರ್ ಮಾಡಿದ ಹೀನಾ ಸಿಧು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಹೊಸ ದಾಖಲೆಯನ್ನೂ ಸಹ ನಿರ್ಮಿಸಿದ್ದಾರೆ. ಪ್ರಸಕ್ತ  ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಇದು ಹೀನಾ ಸಿಧು ಗೆದ್ದಿರುವ ಎರಡನೇ ಪದಕವಾಗಿದ್ದು, ಇದಕ್ಕೂ ಮುನ್ನ ಮಹಿಳೆಯರ 10 ಮೀಟರ್ ಏರ್ ಪಿಸ್ಟಲ್ ವಿಭಾಗದ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು.

11 ಚಿನ್ನ, 4 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಜಯಿಸಿರುವ ಭಾರತ ಪದಕ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ.

Leave a Reply

Your email address will not be published.

Social Media Auto Publish Powered By : XYZScripts.com