ಹಿಮಾಚಲ ಪ್ರದೇಶ : ಕಮರಿಗೆ ಬಿದ್ದ ಶಾಲಾ ಬಸ್ : 27 ಮಕ್ಕಳ ದುರ್ಮರಣ

ಶಾಲಾ ಬಸ್ ಒಂದು 100 ಅಡಿ ಕಮರಿಗೆ ಉರುಳಿ ಬಿದ್ದ ಪರಿಣಾಮ 27 ಮಕ್ಕಳು ದುರ್ಮರಣಕ್ಕೀಡಾಗಿದ ಘಟನೆ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ನುರ್ಪುರ್ ಸೋಮವಾರ ನಡೆದಿದೆ. ದುರ್ಘಟನೆಯಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಮಕ್ಕಳೆಲ್ಲರೂ ನುರ್ಪುರ್ ಪಟ್ಟಣದ ವಜೀರ್ ರಾಮ ಸಿಂಗ್ ಪಠಾನಿಯಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾಗಿದ್ದರು. ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಎನ್ ಡಿಆರ್ ಎಫ್ (NDRF) ಪಡೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ಘಟನೆ ವೇಳೆ ಬಸ್ ನಲ್ಲಿ ಸಿಲುಕಿಕೊಂಡಿದ್ದ ಕೆಲವು ಮಕ್ಕಳನ್ನು ರಕ್ಷಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com