ಎದೆನೋವಿನಿಂದ ಬಳಲುತ್ತಿದ್ದ ನಾದಬ್ರಹ್ಮ ಹಂಸಲೇಖ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು : ಎದೆನೋವಿನಿಂದ ಆಸ್ಪತ್ರೆಗೆ ಸೇರಿದ್ದ ನಾದಬ್ರಹ್ಮ ಹಂಸಲೇಖ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ತಿಳಿದುಬಂದಿದೆ.  ಹಂಸಲೇಖ ಅವರಿಗೆ ಸರಿಗಮಪ ಕಾರ್ಯಕ್ರಮ ನಡೆಯುವ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ನಗರದ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಝೀ ವಾಹಿನಿಯಲ್ಲಿ ಬರುವ ಸರಿಗಮಪ ಸಿಂಗಿಂಗ್‌ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದ ವೇಳೆ ಹಂಸಲೇಖ ಅವರಿಗೆ ಲಘುವಾಗಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೆ ಅವರನ್ನು ಕನ್ನಿಂಗ್‌ಹ್ಯಾಂ ರಸ್ತೆಯಲ್ಲಿರುವ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಹಂಸಲೇಖ ಅವರಿಗೆ ಹೃದಯಾಘಾತವಾಗಿಲ್ಲ. ಗ್ಯಾಸ್ಟ್ರಿಕ್‌ ಸಮಸ್ಯೆಯಿಂದಾಗಿ ಎದೆನೋವು ಕಾಣಿಸಿಕೊಂಡಿದೆ. ಅಭಿನಮಾನಿಗಳು ಭಯಪಡುವ ಅಗತ್ಯವಿಲ್ಲ ಎಂದು ವಾಹಿನಿಯ ಮೂಲಗಳು ಅನ್‌ ಸುದ್ದಿಗೆ ತಿಳಿಸಿದ್ದವು. ಸದ್ಯ ಹಂಸಲೇಖ ಅವರ ಆರೋಗ್ಯ ಸುಧಾರಿಸುತ್ತಿರುವುದಾಗಿ ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com