ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡ್ತಾರಂತೆ ಸಿದ್ದರಾಮಯ್ಯ : ನಾಮಪತ್ರ ಸಲ್ಲಿಕೆಗೆ ಡೇಟ್‌ ಫಿಕ್ಸ್‌

ಬೆಂಗಳೂರು : ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳುತ್ತಿವೆ. ಈಗ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಮೈಸೂರಿನ ಚಾಮುಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದಾಗಿ ಸಿಎಂ ಹೇಳಿದ್ದಾರೆ. ಅಲ್ಲದೆ ಇದಕ್ಕೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್‌ ಸಹ ಸಿಕ್ಕಿರುವುದಾಗಿ ತಿಳಿದುಬಂದಿದೆ. ಏಪ್ರಿಲ್‌ 23ರಂದು ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿರುವ ಸಿಎಂ, ಏಪ್ರಿಲ್‌ 24 ಕ್ಕೆ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಾದಾಮಿಯ ಕಾಂಗ್ರೆಸ್‌ ನಾಯಕರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಬಾದಾಮಿಯಿಂದಲಸೂ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಬಾದಾಮಿಯಿಂದ ಸಿಎಂ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದ ಹಾಲಿ ಶಾಸಕ ಚಿಮ್ಮನಕಟ್ಟಿ ಸಹ ಸಿಎಂ ಸ್ಪರ್ಧೆಗೆ ಆಹಾವನ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರದಿಂದ ಕಣಕ್ಕಿಳಿಯಲು ಸಿಎಂ ಸಜ್ಜಾಗಿದ್ದಾರೆ.

 

 

21 thoughts on “ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡ್ತಾರಂತೆ ಸಿದ್ದರಾಮಯ್ಯ : ನಾಮಪತ್ರ ಸಲ್ಲಿಕೆಗೆ ಡೇಟ್‌ ಫಿಕ್ಸ್‌

Leave a Reply

Your email address will not be published.

Social Media Auto Publish Powered By : XYZScripts.com